ಅಷ್ಟಾವಕ್ರ ಗೀತಾ - ೫

ಲಯದ ಉಪದೇಶ

ಅಷ್ಟಾವಕ್ರ ಉವಾಚ ..

ನ ತೇ ಸಂಗೋಽಸ್ತಿ ಕೇನಾಪಿ ಕಿಂ ಶುದ್ಧಸ್ತ್ಯಕ್ತುಮಿಚ್ಛಸಿ .
ಸಂಘಾತವಿಲಯಂ ಕುರ್ವನ್ನೇವಮೇವ ಲಯಂ ವ್ರಜ .. 5-1..

ಅಷ್ಟಾವಕ್ರನು ಜನಕನಿಗೆ ಮೋಕ್ಷದ ಮಾರ್ಗವನ್ನು ತಿಳಿಸಿ ಹೇಳುತ್ತಾ ಹೀಗೆ ಹೇಳುತ್ತಾನೆ-

ನೀನು ನಿಸ್ಸಂಗನು, ಶುದ್ಧನು ಆಗಿರುವಾಗ ಏನನ್ನು ತಾನೇ ತ್ಯಜಿಸಲು ಇಚ್ಛಿಸುವೆ? ನೀನು ಶರೀರ ಎನ್ನುವ ಭಾವನೆಯನ್ನು ಬಿಟ್ಟು ಲಯವನ್ನು, ಮುಕ್ತಿಯನ್ನು ಹೊಂದು

ಉದೇತಿ ಭವತೋ ವಿಶ್ವಂ ವಾರಿಧೇರಿವ ಬುದ್ಬುದಃ .
ಇತಿ ಜ್ಞಾತ್ವೈಕಮಾತ್ಮಾನಮೇವಮೇವ ಲಯಂ ವ್ರಜ .. 5-2..

ಸಾಗರದಿಂದ ಅಲೆಗಳು ಉದಯಿಸಿದಂತೆ, ಈ ವಿಶ್ವವೆಲ್ಲ ನಿನ್ನಿಂದಲೆ ಉದ್ಭವವಾಗುತ್ತದೆ ಇದನ್ನು ತಿಳಿದು, ನೀನೇ ಆತ್ಮನೆಂದು ತಿಳಿದು, ಲಯವನ್ನು (ಮೋಕ್ಷವನ್ನು) ಹೊಂದು.

ಪ್ರತ್ಯಕ್ಷಮಪ್ಯವಸ್ತುತ್ವಾದ್ ವಿಶ್ವಂ ನಾಸ್ತ್ಯಮಲೇ ತ್ವಯಿ .
ರಜ್ಜುಸರ್ಪ ಇವ ವ್ಯಕ್ತಮೇವಮೇವ ಲಯಂ ವ್ರಜ .. 5-3..

ಹಗ್ಗ ಸರ್ಪದಂತೆ ಕಾಣುವಂತೆ, ಪ್ರತ್ಯಕ್ಷವೆನಿಸಿದರೂ ಅವಸ್ತುವಾದದ್ದರಿಂದ (ಮಿಥ್ಯೆಯಾದದ್ದರಿಂದ) ಈ ವಿಶ್ವವು ಅಮಲನಾದ ನಿನ್ನಲ್ಲಿ ಇಲ್ಲ. ಇದನ್ನು ಅರಿತು ಲಯವನ್ನು ಹೊಂದು.

ಸಮದುಃಖಸುಖಃ ಪೂರ್ಣ ಆಶಾನೈರಾಶ್ಯಯೋಃ ಸಮಃ .
ಸಮಜೀವಿತಮೃತ್ಯುಃ ಸನ್ನೇವಮೇವ ಲಯಂ ವ್ರಜ .. 5-4..

ನೀನಗೆ ಸುಖ-ದುಃಖಗಳು ಸಮಾನ. ನಿನಗೆ ಆಶಾ-ನಿರಾಶೆಗಳು ಸಮಾನ. ಜೀವನ-ಮೃತ್ಯುಗಳು ಸಮಾನ. ಈ ರೀತಿಯವನಾಗಿರುವ ನೀನು ಲಯವನ್ನು ಹೊಂದು. 

 

ಸಂಪೂರ್ಣ ಕೃತಿಯನ್ನು ಡೌನ್ ಲೋಡ್ ಮಾಡಿ. 

Comments

Popular posts from this blog

ಅಷ್ಟಾವಕ್ರಗೀತಾ - ೧

ಅಷ್ಟಾವಕ್ರಗೀತಾ - ೩

ಅಷ್ಟಾವಕ್ರಗೀತಾ - ೨